ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ವರದಿ

Posted On: 12 JUL 2021 9:27AM by PIB Bengaluru

ದೇಶವ್ಯಾಪಿ ಕಾಣಿಸಿಕೊಂಡಿರುವ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುಸ್ಥಿರ ಮತ್ತು ಸಹಭಾಗಿತ್ವದ ಪ್ರಯತ್ನಗಳನ್ನು ನಡೆಸುತ್ತಿದ್ದು, ಇದುವರೆಗೆ ದೇಶಾದ್ಯಂತ 3 ಕೋಟಿಗಿಂತ ಹೆಚ್ಚಿನ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಇದೀಗ 97.22%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 39,649 ರೋಗಿಗಳು ಗುಣಮುಖರಾಗಿದ್ದಾರೆ.

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 37.73 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 37,154 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,50,899ಕ್ಕೆ ಇಳಿಕೆ ಕಂಡಿದೆ.

ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ 1.46%ಗೆ ಇಳಿದಿದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.32%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ (ಸೋಂಕಿತರ ಸಂಖ್ಯೆ) 2.59% ಇದ್ದು, ಸತತ 21ನೇ ದಿನದಲ್ಲಿ 3% ಮಟ್ಟದಿಂದ ಕೆಳಗಿದೆ.

ಕೊರೊನಾ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ದೇಶಾದ್ಯಂತ ಇದುವರೆಗೆ 43.23 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1734720) Visitor Counter : 218