ಪ್ರಧಾನ ಮಂತ್ರಿಯವರ ಕಛೇರಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
12 JUL 2021 5:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಾಚಲ ಪ್ರದೇಶದಲ್ಲಿನ ಭಾರೀ ಮಳೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಆಪ್ತ ನಿಗಾ ಇಡಲಾಗಿದೆ. ರಾಜ್ಯ ಸರ್ಕಾರದೊಂದಿಗೆ ಪ್ರಾಧಿಕಾರಗಳು ಕಾರ್ಯ ನಿರ್ವಹಿಸುತ್ತಿವೆ. ಎಲ್ಲ ಸಾಧ್ಯ ನೆರವನ್ನೂ ನೀಡಲಾಗುತ್ತಿದೆ. ಬಾಧಿತ ಪ್ರದೇಶಗಳಲ್ಲಿರುವವರ ಸುರಕ್ಷತೆಗೆ ನಾನು ಪ್ರಾರ್ಥಿಸುತ್ತೇನೆ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1734931)
ವಿಸಿಟರ್ ಕೌಂಟರ್ : 267
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam