ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
Posted On:
13 JUL 2021 10:34AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 38.14 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ನಿನ್ನೆ ಅಂದರೆ ಕಳೆದ 24 ತಾಸುಗಳಲ್ಲಿ 31,443 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ; ಕಳೆದ 118 ದಿನಗಳಲ್ಲಿ ಅತ್ಯಂತ ನಿಷ್ಠ ಪ್ರಮಾಣ ಇದಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,00,63,720 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದರೊಂದಿಗೆ ಚೇತರಿಕೆ ದರ 97.28%ಗೆ ಸುಧಾರಣೆ ಕಂಡಿದೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 49,007 ರೋಗಿಗಳು ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಲ ಪ್ರಮಾಣ ಪ್ರಸ್ತುತ 4,31,315ಕ್ಕೆ ಇಳಿಕೆ ಕಂಡಿದೆ. ಕಳೆದ 109 ದಿನಗಳಲ್ಲಿ ಇದು ಅತ್ಯಂತ ಕನಿಷ್ಠ.
ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ 1.40% ಇದೆ.
ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.28%ಗೆ ತಗ್ಗಿದೆ.
ದೈನಂದಿನ ಪಾಸಿಟಿವಿಟಿ ದರ ಸತತ 22ನೇ ದಿನದಲ್ಲೂ 3% ಮಟ್ಟದ ಕೆಳಗಿದ್ದು, ಅದೀಗ 1.81%ಗೆ ಇಳಿದಿದೆ.
ದೇಶಾದ್ಯಂತ ಗಂಟು ಮತ್ತು ಮೂಗು ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ 43.40 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1735018)
Visitor Counter : 252
Read this release in:
English
,
Urdu
,
Hindi
,
Marathi
,
Bengali
,
Punjabi
,
Gujarati
,
Odia
,
Tamil
,
Telugu
,
Malayalam