ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ನೀಡಿಕೆಯ ಪರಿಷ್ಕೃತ ವರದಿ


ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 39.46 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ಪೂರೈಕೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 1.91 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ಲಭ್ಯ

प्रविष्टि तिथि: 13 JUL 2021 10:09AM by PIB Bengaluru

ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚಿನ ಲಸಿಕೆ ಲಭ್ಯತೆ ನೀಡಿಕೆ, ಮುಂಗಡವಾಗಿ ಲಸಿಕೆ ಲಭ್ಯತೆಯ ಗೋಚರತೆ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೋವಿಡ್-19 ಲಸಿಕೆ ಅಭಿಯಾನವನ್ನು ವ್ಯಾಪಕಗೊಳಿಸಲಾಗಿದೆ.

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕೆ ಆಂದೋಲನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಯನ್ನು ವಿತರಿಸಿ, ಬೆಂಬಲ ನೀಡುತ್ತಾ ಬಂದಿದೆ. ಅಭಿಯಾನದ ಸಾರ್ವತ್ರಿಕರಣದ ಹೊಸ ಹಂತದಲ್ಲಿ ಕೇಂದ್ರ ಸರ್ಕಾವು ದೇಶೀಯ ಲಸಿಕೆ ತಯಾರಿಕೆ ಕಂಪನಿಗಳಿಂದ 75% ಲಸಿಕೆ ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದೆ.

ಕೇಂದ್ರ ಸರ್ಕಾರವು ಎಲ್ಲಾ ಖರೀದಿ ಮೂಲಗಳಿಂದ ಇದುವರೆಗೆ 39.46 ಕೋಟಿಗಿಂತ ಹೆಚ್ಚಿನ ಅಂದರೆ 39,46,94,020 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಿದೆ. ಇನ್ನೂ ಹೆಚ್ಚುವರಿಯಾಗಿ 12,00,000 ಡೋಸ್ ಲಸಿಕೆ ಸದ್ಯದಲ್ಲೇ ವಿತರಣೆ ಆಗಲಿದೆ.

 39.46 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 37,55,38,390 ಡೋಸ್ ಬಳಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ದತ್ತಾಂಶದಿಂದ ಇದು ತಿಳಿದುಬಂದಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 1.91 ಕೋಟಿಗಿಂತ ಹೆಚ್ಚಿನ ಅಂದರೆ 1,91,55,630 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

***


(रिलीज़ आईडी: 1735019) आगंतुक पटल : 274
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Bengali , Punjabi , Gujarati , Tamil , Telugu