ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಲಸಿಕೆ ನೀಡಿಕೆ; ಇಂದಿನ ವರದಿ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 39.59 ಕೋಟಿ ಡೋಸ್ ಗಿಂತ ಹೆಚ್ಚಿನ ಕೋವಿಡ್-19 ಲಸಿಕೆ ಪೂರೈಕೆ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 1.51 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಲಭ್ಯ
Posted On:
14 JUL 2021 10:24AM by PIB Bengaluru
ಕೇಂದ್ರ ಸರ್ಕಾರ ದೇಶವ್ಯಾಪಿ ನಡೆಸುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಬದ್ಧವಾಗಿದೆ. ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚಿನ ಪ್ರಮಾಣದ ಲಸಿಕೆ ಪೂರೈಕೆ ಖಾತ್ರಿಗೊಳಿಸುವ ಮೂಲಕ, ಅವುಗಳಿಗೆ ಹೆಚ್ಚಿನ ಲಸಿಕೆ ಲಭ್ಯತೆಯ ಗೋಚರತೆ ಖಚಿತಪಡಿಸುವ ಮಲಕ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಅಭಿಯಾನವನ್ನು ಹೆಚ್ಚಿಸಲಾಗಿದೆ.
ದೇಶವ್ಯಾಪಿ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಯನ್ನು ಒದಗಿಸುತ್ತಿದೆ. ಕೋವಿಡ್-19 ಲಸಿಕೆ ಅಭಿಯಾನದ ಸಾರ್ವತ್ರೀಕರಣ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ಉಚಿತವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸುತ್ತಿದೆ.
ಕೇದ್ರ ಸರ್ಕಾರವು 39.59 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆಯನ್ನು ಅಂದರೆ 39,59,21,220 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ಮೂಲಗಳಿಂದ ಖರೀದಿಸಿ, ವಿತರಿಸಿದೆ. ಇನ್ನೂ 30,250 ಡೋಸ್ ಲಸಿಕೆ ಸದ್ಯದಲ್ಲೇ ಲಭ್ಯವಾಗಲಿದೆ.
39.59 ಕೋಟಿ ಡೋಸ್ ಲಸಿಕೆಯ ಪೈಕಿ ಸವಕಳಿ ಸೇರಿದಂತೆ 38,07,68,770 ಡೋಸ್ ಲಸಿಕೆ ಬಳಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ದತ್ತಾಂಶದಿಂದ ಇದು ತಿಳಿದುಬಂದಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ ಇನ್ನೂ 1.51 ಕೋಟಿಗಿಂತ ಹೆಚ್ಚಿನ ಅಂದರೆ 1,51,52,450 ಡೋಸ್ ಲಸಿಕೆ ಲಭ್ಯವಿದೆ.
***
(Release ID: 1735319)
Visitor Counter : 292