ಸಂಪುಟ

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಡೆನ್ಮಾರ್ಕ್ ಸಂಸ್ಥಾನ ಮತ್ತು ಭಾರತ ನಡುವಿನ ತಿಳಿವಳಿಕೆ ಒಪ್ಪಂದ (ಎಂ.ಓ.ಯು.)ಕ್ಕೆ ಸಚಿವ ಸಂಪುಟದ ಅನುಮೋದನೆ

Posted On: 14 JUL 2021 4:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಗಣರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಡಿನ್ಮಾರ್ಕ್ ಕಿಂಗ್ ಡಮ್ ನ ಆರೋಗ್ಯ ಸಚಿವಾಲಯದ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿನ ಸಹಕಾರ ಕುರಿತ ತಿಳಿವಳಿಕೆ ಒಪ್ಪಂದ (ಎಂ.ಓ.ಯು.)ಕ್ಕೆ ತನ್ನ ಅನುಮೋದನೆ ನೀಡಿದೆ.

ಪ್ರಯೋಜನಗಳು:

ಈ ದ್ವಿಪಕ್ಷೀಯ ತಿಳಿವಳಿಕೆ ಒಪ್ಪಂದವು ಆರೋಗ್ಯ ಕ್ಷೇತ್ರದಲ್ಲಿ ಜಂಟಿ ಉಪಕ್ರಮ ಮತ್ತು ತಂತ್ರಜ್ಞಾನ ಅಭಿವೃದ್ಧಿಯ ಮೂಲಕ ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಡೆನ್ಮಾರ್ಕ್ ಕಿಂಗ್ ಡನ್ ಆರೋಗ್ಯ ಸಚಿವಾಲಯದ  ನಡುವೆ ಸಹಕಾರ ಉತ್ತೇಜಿಸುತ್ತದೆ. ಇದು ಭಾರತ ಮತ್ತು ಡೆನ್ಮಾರ್ಕ್ ನಡುವೆ ದ್ವಿಪಕ್ಷೀಯ ಬಾಂಧವ್ಯವನ್ನು ಬಲವರ್ಧಿಸುತ್ತದೆ.

ದ್ವಿಪಕ್ಷೀಯ ತಿಳಿವಳಿಕೆ ಒಪ್ಪಂದವು ಆರೋಗ್ಯ ಕ್ಷೇತ್ರದಲ್ಲಿ ಜಂಟಿ ಉಪಕ್ರಮ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯ ಮೂಲಕ ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಡೆನ್ಮಾರ್ಕ್ ಕಿಂಗ್ ಡನ್ ಆರೋಗ್ಯ ಸಚಿವಾಲಯದ ನಡುವೆ ಸಹಕಾರ ಉತ್ತೇಜಿಸುತ್ತದೆ. ಇದು ಎರಡೂ ದೇಶಗಳ ಜನರ ಸಮುದಾಯ ಆರೋಗ್ಯ ಸ್ಥಿತಿ ಸುಧಾರಣೆಗೆ ಅವಕಾಶ ಕಲ್ಪಿಸುತ್ತದೆ.

****



(Release ID: 1735486) Visitor Counter : 238