ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 15 JUL 2021 9:15AM by PIB Bengaluru

ದೇಶವ್ಯಾಪಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 39.13 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ದೇಶಾದ್ಯಂತ 3,01,43,850 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಇದೀಗ 97.28%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 39,130 ರೋಗಿಗಳು ಗುಣಮುಖರಾಗಿದ್ದಾರೆ.

ದೇಶದಲ್ಲಿ ನಿನ್ನೆ ಒಂದೇ ದಿನ ಅಂದರೆ ಕಳೆದ 24 ತಾಸುಗಳಲ್ಲಿ 41,806 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,32,041ಕ್ಕೆ ಇಳಿಕೆ ಕಂಡಿದೆ.

ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.39% ಇದೆ.

ವಾರದ ಪಾಸಿಟಿವಿಟಿ ದರ ಸತತ 5% ಮಟ್ಟದ ಕೆಳಗೆ ಕಾಯ್ದುಕೊಂಡಿದ್ದು, ಅದೀಗ 2.21%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ (ಸೋಂಕಿತರ ಸಂಖ್ಯೆ) ಸತತ 24 ದಿನಗಳಿಂದ 3% ಮಟ್ಟದಿಂದ ಕೆಳಗಿದ್ದು, ಪ್ರಸ್ತುತ 2.15%ಗೆ ಇಳಿಕೆ ಕಂಡಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗು ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 43.80 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1735782) Visitor Counter : 188