ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 16 JUL 2021 9:13AM by PIB Bengaluru

ದೇಶವ್ಯಾಪಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದಲ್ಲಿ ಇದುವರೆಗೆ 39.53 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,01,83,876 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಒಟ್ಟಾರೆ ಚೇತರಿಕೆ ದರ97.28%ಗೆ ಸುಧಾರಮೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 40,026 ರೋಗಿಗಳು ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 38,949 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದ ಸಕ್ರಿಯ ಪ್ರಕರಣಗಳ ಪ್ರಮಾಣ ಪ್ರಸ್ತು 4,30,422ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.39% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಒಳಗೆ ಕಾಯ್ದುಕೊಂಡಿದ್ದು, ಅದೀಗ 2.14%ಗೆ ಇಳಿಕೆ ಕಂಡಿದೆ.

ದೈನಂದಿನ ಪಾಸಿಟಿವಿಟಿ ದರ 1.99%ಗೆ ಇಳಿದಿದೆ. ಸತತ 25 ದಿನಗಳಿಂದ ಅದು 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 44 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1736090) Visitor Counter : 223