ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಲಸಿಕೆ ಕುರಿತ ತಾಜಾ ಮಾಹಿತಿ
ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ 41.10 ಕೋಟಿಗೂ ಅಧಿಕ ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ
2.51 ಕೋಟಿಗಿಂತಲೂ ಹೆಚ್ಚು ಉಳಿಕೆಯಾದ ಮತ್ತು ಬಳಕೆಯಾಗದ ಡೋಸ್‌ಗಳು ಇನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿವೆ
Posted On:
16 JUL 2021 10:36AM by PIB Bengaluru
ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೆಯ ಸಾರ್ವತ್ರೀಕರಣದ ಹೊಸ ಹಂತವು 2021ರ ಜೂನ್ 21ರಿಂದ ಆರಂಭವಾಗಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಗಡವಾಗಿಯೇ ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ ಇತ್ಯಾದಿ ಕ್ರಮಗಳ ಮೂಲಕ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಇದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉತ್ತಮ ಯೋಜನೆಯನ್ನು ರೂಪಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸಲು ಅನುಕೂಲವಾಗಿದೆ.
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್ ಲಸಿಕೆಗಳನ್ನು ಒದಗಿಸುವ ಮೂಲಕ ನೆರವು ನೀಡಲಿದೆ. ಕೋವಿಡ್-19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ಹೊಸ ಹಂತದ ಭಾಗವಾಗಿ, ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಲಸಿಕೆಗಳಲ್ಲಿ ಶೇ.75ರಷ್ಟನ್ನು ಕೇಂದ್ರ ಸರಕಾರವೇ ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತವಾಗಿ) ಪೂರೈಸಲಿದೆ.
ಲಸಿಕೆ ಡೋಸ್‌ಗಳು
|
(16 ಜುಲೈ 2021ರಂದು ಇದ್ದಂತೆ)
|
ಸರಬರಾಜು ಮಾಡಿರುವುದು
|
41,10,38,530
|
ಸರಬರಾಜು ಹಂತದಲ್ಲಿರುವುದು
|
52,90,640
|
ಬಳಕೆಯಾಗಿರುವುದು
|
38,58,75,958
|
ಉಳಿಕೆ ಲಭ್ಯವಿರುವುದು
|
2,51,62,572
|
ಇದುವರೆಗೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ಮೂಲಗಳ ಮೂಲಕ 41.10 ಕೋಟಿಗಿಂತಲೂ ಅಧಿಕ (41,10,38,530) ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ ಮತ್ತು ಇನ್ನೂ 52,90,640 ಡೋಸ್‌ಗಳು ಮಾರ್ಗಮಧ್ಯದಲ್ಲಿವೆ.
ಈ ಪೈಕಿ ವ್ಯರ್ಥವಾದ ಲಸಿಕೆ ಡೋಸ್‌ಗಳೂ ಸೇರಿದಂತೆ ಒಟ್ಟು 38,58,75,958 ಡೋಸ್‌ಗಳು ಬಳಕೆಯಾಗಿವೆ (ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿದ್ದ ದತ್ತಾಂಶದ ಪ್ರಕಾರ).
2.51 ಕೋಟಿಗಿಂತಲೂ ಅಧಿಕ (2,51,62,572) ಉಳಿಕೆಯಾದ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್‌ಗಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಇನ್ನೂ ಲಭ್ಯವಿದೆ.
***
(Release ID: 1736092)
Visitor Counter : 282