ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 17 JUL 2021 9:20AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 39.96 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯವರೆಗೆ ಒಟ್ಟು 3,02,27,792 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಪ್ರಸ್ತುತ 97.31%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 43,916 ರೋಗಿಗಳು ಗುಣಮುಖರಾಗಿದ್ದಾರೆ.

ಭಾರತದಲ್ಲಿ ನಿನ್ನೆ ಅಂದರೆ ಕಳೆದ 24 ತಾಸುಗಳಲ್ಲಿ 38,079 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,24,025ಕ್ಕೆ ಇಳಿಕೆ ಕಂಡಿದೆ.

ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.36% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಅದೀಗ 2.10%ಗೆ ಇಳಿಕೆ ಕಂಡಿದೆ.

ದೈನಂದಿನ ಪಾಸಿಟಿವಿಟಿ ದರ 1.91%ಗೆ ಕುಸಿದಿದ್ದು, ಸತತ 26 ದಿನಗಳಿಂದ 3% ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 44.20 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1736432) Visitor Counter : 235