ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿಎಂಎನ್ಆರ್.ಎಫ್.ನಿಂದ ಪರಿಹಾರ ಘೋಷಣೆ
Posted On:
18 JUL 2021 10:47AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಚಂಬೂರ್ ಮತ್ತು ವಿಖರೋಲಿಯಲ್ಲಿ ಗೋಡೆ ಕುಸಿದು ಸಂಭವಿಸಿರುವ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನೂ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಸರಣಿ ಟ್ವೀಟ್ ನಲ್ಲಿ, ಪ್ರಧಾನಮಂತ್ರಿಯವರು, "ಮುಂಬೈನ ಚಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿತದಿಂದ ಸಂಭವಿಸಿರುವ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಈ ನೋವಿನ ಸಮಯದಲ್ಲಿ, ಸಂತ್ರಸ್ತರ ಕುಟುಂಬದೊಂದಿಗೆ ನನ್ನ ಸಂವೇದನೆ ಇರುತ್ತದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi.
ಮುಂಬೈನ ಗೋಡೆ ಕುಸಿತದಿಂದ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳು ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪಿಎಂಎನ್ಆರ್.ಎಫ್.ನಿಂದ ಪ್ರಕಟಿಸಿದ್ದಾರೆ.
***
(Release ID: 1736576)
Visitor Counter : 274
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam