ಪ್ರಧಾನ ಮಂತ್ರಿಯವರ ಕಛೇರಿ

ನಂದುರ್ಬಾರ್ ಅಪಘಾತ ದುರಂತಕ್ಕೆ ಪ್ರಧಾನ ಮಂತ್ರಿ ಶೋಕ


ಪರಿಹಾರ ಘೋಷಣೆ

Posted On: 18 JUL 2021 11:23PM by PIB Bengaluru

ಮಹಾರಾಷ್ಟ್ರದ ನಂದುರ್ಬಾರ್|ನಲ್ಲಿ ಸಂಭವಿಸಿದ ಅಪಘಾತ ದುರಂತಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಹಠಾತ್ತನೇ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ಮೃತರಾದ ಸಂತ್ರಸ್ತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, “ಮಹಾರಾಷ್ಟ್ರದ ನಂದುರ್ಬಾರ್|ನಿಂದ ದುರಂತ ಸುದ್ದಿ ಬಂದಿದೆ. ಅಪಘಾತದಲ್ಲಿ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದುಎಂದಿದ್ದಾರೆ.

***

 

 


(Release ID: 1736776) Visitor Counter : 189