ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ಪರಿಷ್ಕೃತ ವರದಿ


ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 42.15 ಕೋಟಿಗಿಂತ ಹೆಚ್ಚಿನ ಲಸಿಕೆ ಪೂರೈಕೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.11 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ಲಭ್ಯ

Posted On: 20 JUL 2021 9:54AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತರಿಪಡಿಸುವ ಮೂಲಕ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಮತ್ತು ಲಸಿಕೆ ಪೂರೈಕೆಯ ಸರಪಳಿ ಸುಗಮಗೊಳಿಸುವ ಮೂಲಕ ಬೃಹತ್ ಅಭಿಯಾನಕ್ಕೆ ವೇಗ ನೀಡಲಾಗಿದೆ, ಅದರ ವ್ಯಾಪ್ತಿ ಹೆಚ್ಚಿಸಲಾಗಿದೆ.

ದೇಶವ್ಯಾಪಿ ಲಸಿಕೆ ಆಂದೋಲನದ ಭಾಗವಾಗಿ, ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ಪೂರೈಸುತ್ತಿದೆ. ಅಭಿಯಾನದ ಸಾರ್ವತ್ರೀಕರಣದ ಹೊಸ ಹಂತದಲ್ಲಿ ಕೇಂದ್ರ ಸರ್ಕಾರವು ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸುತ್ತಿದೆ.

ಲಸಿಕೆ ಡೋಸ್ ಗಳು

20 ಜುಲೈ 2021ಕ್ಕೆ ಅನ್ವಯವಾಗುವಂತೆ

 

ಪೂರೈಕೆಯಾದ ಲಸಿಕೆ ಪ್ರಮಾಣ

 

42,15,43,730

 

ಸದ್ಯವೇ ಬರಲಿರುವ ಲಸಿಕೆ ಪ್ರಮಾಣ

 

71,40,000

 

ಬಳಕೆಯಾದ ಪ್ರಮಾಣ

 

40,03,50,489

 

ಲಭ್ಯವಿರುವ ಬಳಕೆಯಾಗದೆ ಉಳಿದಿರುವ ಲಸಿಕೆ

 

 

2,11,93,241

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 42.15 ಕೋಟಿ ಡೋಸ್ ಗಿಂತ ಹೆಚ್ಚಿನ ಅಂದರೆ 42,15,43,730 ಡೋಸ್ ಲಸಿಕೆ ಪೂರೈಸಲಾಗಿದೆ, ಇನ್ನೂ ಹೆಚ್ಚಿನ 71,40,000 ಡೋಸ್ ಲಸಿಕೆ ಅತಿಶೀಘ್ರವೇ ಪೂರೈಕೆ ಆಗಲಿದೆ.

ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ದತ್ತಾಂಶದ ಪ್ರಕಾರ, 42.15 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ 40,03,50,489 ಡೋಸ್ ಲಸಿಕೆ ಬಳಕೆಯಾಗಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆ ಆಗದೆ ಉಳಿದಿರುವ 2.11 ಕೋಟಿಗಿಂತ ಹೆಚ್ಚಿನ ಅಂದರೆ 2,11,93,241 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

***



(Release ID: 1737135) Visitor Counter : 226