ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 20 JUL 2021 9:18AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 41.18 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶವ್ಯಾಪಿ ಇದುವರೆಗೆ 3,03,53,710 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಒಟ್ಟಾರೆ ಚೇತರಿಕೆ ದರ 97.37%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ 45,254 ರೋಗಿಗಳು ಗುಣಮುಖರಾಗಿದ್ದಾರೆ.

ದೇಶಾದ್ಯಂತ ನಿನ್ನೆ ಅಂದರೆ ಕಳೆದ 24 ತಾಸುಗಳ್ಲಲಿ 30,093 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 125 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 4,06,130ಕ್ಕೆ ಇಳಿಕ ಕಂಡಿದ್ದು, 117 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.30% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗಿದ್ದು, ಅದೀಗ 2.06% ಕಾಯ್ದುಕೊಂಡಿದೆ.

ದೈನಂದಿನ ಪಾಸಿಟಿವಿಟಿ ದರ 1.68% ಇದ್ದು, ಸತತ 29 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಒಟ್ಟು 44.73 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1737136) Visitor Counter : 181