ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 21 JUL 2021 9:25AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 41.54 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶಾದ್ಯಂತ ಇಲ್ಲಿಯ ತನಕ 3,03,90,687 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ 97.36%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 36,977 ರೋಗಿಗಳು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 42,015 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 4,07,170ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.30% ಇದೆ.

ವಾರದ ಪಾಸಿಟಿವಿಟಿ ದರ ಸತತ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಅದೀಗ 2.09% ಕಾಯ್ದುಕೊಂಡಿದೆ.

ದೈನಂದಿನ ಪಾಸಿಟಿವಿಟಿ ದರ ಇದೀಗ 2.27%ಗೆ ಇಳಿಕೆ ಕಂಡಿದ್ದು, ಸತತ 30 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ ಒಟ್ಟು 44.91 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1737476) Visitor Counter : 235