ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
Posted On:
22 JUL 2021 9:16AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಒಟ್ಟು 41.78 ಕೋಟಿ ಡೋಸ್ ಹಾಕಲಾಗಿದೆ.
ಕೋವಿಡ್-19 ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,04,29,339 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದರೊಂದಿಗೆ ಚೇತರಿಕೆ ದರ ಇದೀಗ 97.35%ಗೆ ಸುಧಾರಣೆ ಕಂಡಿದೆ.
ದೇಶಾದ್ಯಂತ 38,652 ರೋಗಿಗಳು ಕಳೆದ 24 ತಾಸುಗಳಲ್ಲಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ನಿನ್ನೆ ಒಂದೇ ದಿನ ಅಂದರೆ 41,383 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಭಾರತದ ಸಕ್ರಿಯ ಪ್ರಕರಣಗಳ ಪ್ರಮಾಣ 4,09,394ಕ್ಕೆ ಇಳಿಕೆ ಕಂಡಿದೆ.
ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.31% ಇದೆ.
ವಾರದ ಪಾಸಿಟಿವಿಟಿ ದರ ಸತತ 5% ಮಟ್ಟದಿಂದ ಕೆಳಗಿದ್ದು, ಅದೀಗ 2.12%ಗೆ ತಗ್ಗಿದೆ.
ದೈನಂದಿನ ಪಾಸಿಟಿವಿಟ ದರ 2.41%ಗೆ ಇಳಿದಿದ್ದು, ಸತತ 31 ದಿನಗಳಿಂದ 3% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗು ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ ಒಟ್ಟು 45.09 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1737636)
Visitor Counter : 314