ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ನೀಡಿಕೆಯ ಪರಿಷ್ಕೃತ ವರದಿ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 43.79 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ವಿತರಣೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 3.20 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಲಭ್ಯ

Posted On: 22 JUL 2021 10:14AM by PIB Bengaluru

ಕೇಂದ್ರ ಸರ್ಕಾರ ದೇಶವ್ಯಾಪಿ ನಡೆಸುತ್ತಿರುವ ಬೃಹತ್ ಕೋವಿಡ್-19 ಲಸಿಕೆಯಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಕಾರ್ಯಕ್ರಮದ ಗತಿಯ ವೇಗ ಹೆಚ್ಚಿಸಲು ಬದ್ಧವಾಗಿದೆ. ಕೋವಿಡ್-19 ಲಸಿಕೆ ಅಭಿಯಾದ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ದೇಶಾದ್ಯಂತ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಲಭ್ಯತೆ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಅಭಿಯಾನವನ್ನು ವ್ಯಾಪಕಗೊಳಿಸಲಾಗಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ಪೂರೈಸುತ್ತಿದೆ. ಅಭಿಯಾನದ ಸಾರ್ವತ್ರೀಕರಣ ಹೊಸ ಹಂತದಲ್ಲಿ, ಭಾರತ ಸರ್ಕಾರವು ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ವಿತರಿಸುತ್ತಿದೆ.

 

ಲಸಿಕೆ ಡೋಸ್

 

22 ಜುಲೈ 2021

 

ಪೂರೈಕೆಯಾದ ಲಸಿಕೆ ಪ್ರಮಾಣ

 

43,79,78,900

 

ಸದ್ಯದಲ್ಲೇ ಪೂರೈಕೆಯಾಗಲಿರುವ ಲಸಿಕೆ

 

7,00,000

ಬಳಕೆ ಪ್ರಮಾಣ

40,59,77,410

 

ಬಳಕೆಯಾಗದೆ ಉಳಿದಿರುವ ಲಸಿಕೆ ಲಭ್ಯತೆ

 

 

3,20,01,490

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 43.79 ಕೋಟಿಗಿಂತ ಅಧಿಕ ಡೋಸ್ ಅಂದರೆ 43,79,78,900 ಡೋಸ್ ಲಸಿಕೆಯನ್ನು ಎಲ್ಲ ಖರೀದಿ ಮೂಲಗಳಿಂದ ಪೂರೈಸಲಾಗಿದ್ದು, ಇನ್ನೂ ಹೆಚ್ಚುವರಿಯಾಗಿ 7,00,000 ಡೋಸ್ ಲಸಿಕೆ ಸದ್ಯದಲ್ಲೇ ಪೂರೈಕೆಯಾಗಲಿದೆ.

43.79 ಕೋಟಿ ಡೋಸ್ ಲಸಿಕೆ ಪೈಕಿ ಸವಕಳಿ ಸೇರಿದಂತೆ ಒಟ್ಟು 40,59,77,410 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ಗಮನಾರ್ಹ ಸಂಗತಿ ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ಅಂಕಿಅಂಶಗಳಿಂದ ದೃಢಪಟ್ಟಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3.20 ಕೋಟಿಗಿಂತ ಹೆಚ್ಚಿನ ಡೋಸ್ ಅಂದರೆ 3,20,01,490 ಡೋಸ್ ಲಸಿಕೆ ಬಳಕೆಯಾಗದೆ ಉಳಿದಿದೆ.

***(Release ID: 1737683) Visitor Counter : 136