ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 23 JUL 2021 9:14AM by PIB Bengaluru

ದೇಶವ್ಯಾಪಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 42.34 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ದೇಶದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,04,68,079 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ 97.36%ಗೆ ಸುಧಾರಣೆ ಕಂಡಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 38,740 ರೋಗಿಗಳು ಗುಣಮುಖರಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ಅಂದರೆ ನಿನ್ನೆ ಒಂದೇ ದಿನ ದೇಶಾದ್ಯಂತ 35,342 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,513ಕ್ಕೆ ಇಳಿಕೆ ಕಂಡಿದೆ.

ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.30% ಇದೆ.

ವಾರದ ಪಾಸಿಟಿವಿಟಿ ದರ ನಿರಂತರ 5% ಮಟ್ಟದಿಂದ ಕೆಳಗಿದ್ದು, ಅದೀಗ 2.14%ಗೆ ಇಳಿಕೆ ಕಂಡಿದೆ.

ದೈನಂದಿನ ಪಾಸಿಟಿವಿಟಿ ದರ 2.12%ಗೆ ಇಳಿಕೆ ಕಂಡಿದ್ದು, ಸತತ 32 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ ಒಟ್ಟು 45.29 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1738023) Visitor Counter : 202