ಪ್ರಧಾನ ಮಂತ್ರಿಯವರ ಕಛೇರಿ

ಟೋಕಿಯೊ ಒಲಿಂಪಿಕ್ಸ್ ಆಯೋಜಿಸಿರುವ ಜಪಾನ್ ಪ್ರಧಾನ ಮಂತ್ರಿ ಮತ್ತು ಅಲ್ಲಿನ ಜನತೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ

ಪ್ರಕಟಣಾ ದಿನಾಂಕ: 23 JUL 2021 1:00PM by PIB Bengaluru

ಜಪಾನ್ ರಾಜಧಾನಿ ಟೋಕಿಯೊದ ನೂತನ ಸುಸಜ್ಜಿತ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜಿಸಿರುವ ಜಪಾನ್ ಪ್ರಧಾನ ಮಂತ್ರಿ ಯೊಶಿಹಿದೆ ಸುಗಾ ಅವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು, “ಟೋಕಿಯೊದಲ್ಲಿ ಒಲಿಂಪಿಕ್ಸ್ ಮತ್ತು ಪ್ಯಾರಾಂಲಿಪಿಕ್ಸ್ ಕ್ರೀಡಾಕೂಟ ಆಯೋಜಿಸಿರುವ ಜಪಾನ್ ಪ್ರಧಾನ ಮಂತ್ರಿ ಯೊಶಿಹಿದೆ ಸುಗಾ ಮತ್ತು ಜಪಾನ್ ಜನತೆಗೆ ಈ ಸುಸಂದರ್ಭದಲ್ಲಿ ಶುಭಾಶಯ ಕೋರುತ್ತೇನೆ. ಟೋಕಿಯೊ-ಒಲಿಪಿಕ್ಸ್|ನಲ್ಲಿ ವಿಶ್ವದ ಅತ್ಯುತ್ತಮ ಕ್ರೀಡಾಪಟು(ಅಥ್ಲೀಟ್)ಗಳ ಅದ್ಭುತ ಪ್ರದರ್ಶನಗಳನ್ನು ನೋಡಲು ನಾವೆಲ್ಲಾ  ಎದುರು ನೋಡುತ್ತಿದ್ದೇವೆ, ಕಾತರರಾಗಿದ್ದೇವೆ!”  ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1738183) ವಿಸಿಟರ್ ಕೌಂಟರ್ : 270