ಪ್ರಧಾನ ಮಂತ್ರಿಯವರ ಕಛೇರಿ
ತೆಲಂಗಾಣದ ನಾಗರಕರ್ನೂಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ಪರಿಹಾರ ಘೋಷಣೆ
Posted On:
23 JUL 2021 9:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣದ ನಾಗರಕರ್ನೂಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಸಂಬಂಧಿಕರಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
"ತೆಲಂಗಾಣದ ನಾಗರಕರ್ನೂಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಲಿ ಎಂದು ಹಾರೈಸುತ್ತೇನೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಮತ್ತು ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂಬ ಪ್ರಧಾನಿಗಳ ಹೇಳಿಕೆಯನ್ನು ಉಲ್ಲೇಖಿಸಿ ಮಂತ್ರಿಗಳ ಕಾರ್ಯಾಲಯ ಈ ಬಗ್ಗೆ ಟ್ವೀಟ್ ಮಾಡಿದೆ.
***
(Release ID: 1738542)
Visitor Counter : 208
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam