ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

42.78 ಕೋಟಿ ಡೋಸ್ ದಾಟಿದ ಭಾರತದ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ


ಕೋವಿಡ್-19 ಚೇತರಿಕೆ ದರ 97.35%ಗೆ ಸುಧಾರಣೆ

ಕಳೆದ 24 ತಾಸುಗಳಲ್ಲಿ ದೈನಂದಿನ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 39,097ಕ್ಕೆ ಇಳಿಕೆ

ಭಾರತದ ಸಕ್ರಿಯ ಪ್ರಕರಣಗಳ ಪ್ರಮಾಣ 4,08,977ಕ್ಕೆ ಇಳಿಕೆ; ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣ ಪ್ರಮಾಣ 1.31% ಮಾತ್ರ

2.40%ಗೆ ತಗ್ಗಿದ ದೈನಂದಿನ ಪಾಸಿಟಿವಿಟಿ ದರ; ಸತತ 33 ದಿನಗಳಿಂದ 3% ಮಟ್ಟದಿಂದ ಕೆಳಗೆ

Posted On: 24 JUL 2021 9:36AM by PIB Bengaluru

ಭಾರತದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದಲ್ಲಿ ಇದುವರೆಗೆ 52,34,188 ಆಂದೋಲನಗಳಲ್ಲಿ 42.78 ಕೋಟಿ ಡೋಸ್ ಗಿಂತ ಹೆಚ್ಚಿನ ಅಂದರೆ 42,78,82,261 ಡೋಸ್ ಲಸಿಕೆ ನೀಡಲಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಬಿಡುಗಡೆ ಆಗಿರುವ ತಾತ್ಕಾಲಿಕ ವರದಿಯಲ್ಲಿ ಈ ವಿಷಯ ದೃಢಪಟ್ಟಿದ್ದು, ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 42,67,799 ಡೋಸ್ ಲಸಿಕೆ ಹಾಕಲಾಗಿದೆ.

ಈ ಕೆಳಗಿನ ಗುಂಪುಗಳು ಅದರಲ್ಲಿ ಸೇರಿವೆ:

ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು

ಮೊದಲ ಡೋಸ್

1,02,83,491

2ನೇ ಡೋಸ್

76,74,804

ಮುಂಚೂಣಿ ಕಾರ್ಯಕರ್ತರು

ಮೊದಲ ಡೋಸ್

1,78,44,127

2ನೇ ಡೋಸ್

1,07,32,410

18-44 ವಯೋಮಾನದವರು

ಮೊದಲ ಡೋಸ್

13,54,32,522

2ನೇ ಡೋಸ್

57,68,314

45-59 ವಯೋಮಾನದವರು

ಮೊದಲ ಡೋಸ್

10,00,94,927

2ನೇ ಡೋಸ್

3,34,30,580

60 ವರ್ಷ ದಾಟಿದವರು

ಮೊದಲ ಡೋಸ್

7,31,64,749

2ನೇ ಡೋಸ್

3,34,56,337

ಒಟ್ಟು

42,78,82,261

ದೇಶವ್ಯಾಪಿ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ಕೇಂದ್ರ ಸರ್ಕಾರವು ಬೃಹತ್ ಲಸಿಕೆ ಆಂದೋಲನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಬದ್ಧವಾಗಿದೆ.

ದೇಶದಲ್ಲಿ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,05,03,166 ಜನರು ಈಗಾಗಲೇ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 35,087 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಫಲವಾಗಿ ದೇಶಾದ್ಯಂತ ಒಟ್ಟಾರೆ ಚೇತರಿಕೆ ಪ್ರಮಾಣ 97.35%ಗೆ ಸುಧಾರಣೆ ಕಂಡಿದೆ.

 

https://static.pib.gov.in/WriteReadData/userfiles/image/image00134KN.jpg

ಭಾರತದಲ್ಲಿ ಕಳೆದ 24 ತಾಸುಗಳಲ್ಲೇ 39,097 ದೈನಂದಿನ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಸತತ 27 ದಿನಗಳಿಂದ ದೇಶದಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 50,000 ಮಟ್ಟದಿಂದ ಕೆಳಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಸುಸ್ಥಿರವಾಗಿ ಮತ್ತು ಜಂಟಿ ಸಹಭಾಗಿತ್ವದಲ್ಲಿ ನಡೆಸುತ್ತಾ ಬಂದಿರುವ ನಿರಂತರ ನಿಯಂತ್ರಣ ಪ್ರಯತ್ನಗಳ ಫಲವಾಗಿ ಹೊಸ ಕೊರೊನಾ ಪ್ರಕರಣಗಳ ಪ್ರಮಾಣ ದಿನೇದಿನೆ ಇಳಿಕೆ ಕಾಣುತ್ತಿದೆ.

https://static.pib.gov.in/WriteReadData/userfiles/image/image00267V0.jpg

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 4,08,977ಕ್ಕೆ ತಗ್ಗಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.31% ಇದೆ.

https://static.pib.gov.in/WriteReadData/userfiles/image/image0031YYR.jpg

ದೇಶಾದ್ಯಂತ ಗಂಟಲು ಮತ್ತು ಮೂಗು ದ್ರವ ಪರೀಕ್ಷೆಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಕಳೆದ 24 ತಾಸುಗಳಲ್ಲಿ ದೇಶವ್ಯಾಪಿ 16,31,266 ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೆ ಒಟ್ಟು 45.45 ಕೋಟಿ ಅಂದರೆ 45,45,70,811 ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದೆಡೆ ದೇಶಾದ್ಯಂತ ಕೊರೊನಾ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.22%ಗೆ ಮ್ತು ದೈನಂದಿನ ಪಾಸಿಟಿವಿಟಿ ದರ ಇದೀಗ 2.40%ಗೆ ಇಳಿಕೆ ಕಂಡಿದೆ. ದೈನಂದಿನ ಪಾಸಿಟಿವಿಟಿ ದರವು ಸತತ 33 ದಿನಗಳಿಂದಲೂ 3% ಮಟ್ಟದಿಂದ ಕೆಳಗೆ ಕಾಯ್ದುಕೊಂಡು ಬಂದಿದೆ. ಜತೆಗೆ, ಸತತ 47 ದಿನಗಳಿಂದಲೂ ಅದು 5% ಮಟ್ಟದಿಂದ ಕೆಳಗಿದೆ.

https://static.pib.gov.in/WriteReadData/userfiles/image/image00411V3.jpg

***


(Release ID: 1738551) Visitor Counter : 236