ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಲಸಿಕೆ ನೀಡಿಕೆಯ ಇಂದಿನ ವರದಿ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 44.53 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಪೂರೈಕೆ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.98 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಲಭ್ಯ
Posted On:
24 JUL 2021 10:42AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ ದೇಶಾದ್ಯಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತ್ರಿಪಡಿಸುವ ಮೂಲಕ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಮೂಲಕ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಅಭಿಯಾನಕ್ಕೆ ವೇಗ ನೀಡಿದೆ.
ದೇಶವ್ಯಾಪಿ ಲಸಿಕೆ ನೀಡಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ಪೂರೈಸುತ್ತಾ ಬಂದಿದೆ. ಆಂದೋಲನ ಸಾರ್ವತ್ರೀಕರಣದ ಹೊಸ ಹಂತದಲ್ಲಿ ಕೇಂದ್ರ ಸರ್ಕಾರವು, ದೇಶೀಯ ಲಸಿಕೆ ತಯಾರಿಕಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಯನ್ನು ವಿತರಿಸುತ್ತಿದೆ.
ಲಸಿಕೆ ಡೋಸ್ ಗಳಲ್ಲಿ
|
24 ಜುಲೈ 2021
|
ಪೂರೈಕೆಯಾದ ಲಸಿಕೆ ಪ್ರಮಾಣ
|
44,53,86,390
|
ಸದ್ಯದಲ್ಲೇ ಲಭ್ಯವಾಗಲಿರುವ ಲಸಿಕೆ ಪ್ರಮಾಣ
|
85,58,360
|
ಬಳಕೆಯಾಗಿರುವ ಲಸಿಕೆ ಪ್ರಮಾಣ
|
41,55,50,543
|
ಬಳಕೆಯಾಗದೆ ಉಳಿದಿರುವ ಲಸಿಕೆ ಲಭ್ಯತೆ
|
2,98,35,847
|
ಒಟ್ಟು 44.53 ಕೋಟಿ ಡೋಸ್ ಗಿಂತ ಹೆಚ್ಚಿನ ಅಂದರೆ 44,53,86,390 ಡೋಸ್ ಲಸಿಕೆಯನ್ನು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲ ಖರೀದಿ ಮೂಲಗಳಿಂದ ಈಗಾಗಲೇ ವಿತರಿಸಲಾಗಿದ್ದು, ಸದ್ಯದಲ್ಲೇ ಹೆಚ್ಚುವರಿ 85,58,360 ಡೋಸ್ ಲಸಿಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಭ್ಯವಾಗಲಿದೆ.
44.53 ಕೋಟಿ ಡೋಸ್ ಲಸಿಕೆಯ ಪೈಕಿ ಸವಕಳಿ ಸೇರಿದಂತೆ 41,55,50,543 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಬಿಡುಗಡೆ ಆಗಿರುವ ದತ್ತಾಂಶದಿಂದ ತಿಳಿದುಬಂದಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 2.98 ಕೋಟಿಗಿಂತ ಹೆಚ್ಚಿನ ಡೋಸ್ ಅಂದರೆ 2,98,35,847 ಡೋಸ್ ಲಸಿಕೆ ಇನ್ನೂ ಬಳಕೆಗೆ ಲಭ್ಯವಿದೆ.
***
(Release ID: 1738552)
Visitor Counter : 258