ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 24 JUL 2021 9:14AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ 42.78 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಸೋಂಕು ದೇಶದಲ್ಲಿ ಕಾಣಿಸಿಕೊಂಡ ಆರಂಭದಿಂದ ಇಲ್ಲಿಯವರೆಗೆ 3,05,03,166 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಪ್ರಸ್ತುತ 97.35%ಗೆ ಸುಧಾರಣೆ ಕಂಡಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 35,087 ರೋಗಿಗಳು ಸೋಂಕಿನಿಂದ ವಾಸಿಯಾಗಿದ್ದಾರೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 39,097 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,08,977ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.31% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.22%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ 2.40%ಗೆ ಇಳಿಕೆ ಕಂಡಿದ್ದು, ಸತತ 33 ದಿನಗಳಿಂದಲೂ 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಗಂಟಲು ಮತ್ತು ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ 45.45 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1738558) Visitor Counter : 196