ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 25 JUL 2021 9:51AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದಲ್ಲಿ ಇದುವರೆಗೆ 43.31 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,05,43,138 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಪ್ರಸ್ತುತ 97.36%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 39,742 ರೋಗಿಗಳು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,08,212ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.30% ಇದೆ.

ವಾರದ ಪಾಸಿಟಿವಿಟಿ ದರ ಸತತ 5% ಮಟ್ಟದಿಂದ ಕೆಳಗಿದ್ದು, ಅದೀಗ 2.24%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ 2.31%ಗೆ ಇಳಿಕೆ ಕಂಡಿದ್ದು, ಸತತ 34 ದಿನಗಳಿಂದಲೂ 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ ಒಟ್ಟು 45.62 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1738914) Visitor Counter : 179