ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆಯ ಇತ್ತೀಚಿನ ವರದಿ


ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ 45.73 ಕೋಟಿ ಲಸಿಕೆ ಡೋಸ್ ಗಳ ಪೂರೈಕೆ

ಜನರಿಗೆ ನೀಡಲು ಇನ್ನೂ 2.28 ಕೋಟಿ ಉಳಿಕೆ ಮತ್ತು ಬಳಕೆಯಾಗದ ಲಸಿಕಾ ಡೋಸ್ ಗಳು ಇನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯ

Posted On: 27 JUL 2021 9:38AM by PIB Bengaluru

ದೇಶದಾದ್ಯಂತ ಕೋವಿಡ್ -19 ಲಸಿಕೆಯನ್ನು ವಿಸ್ತರಿಸುವ ಮತ್ತು ಅದರ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2021ರ ಜೂನ್ 21ರಿಂದ ಕೋವಿಡ್ -19 ಸಾರ್ವತ್ರಿಕ ಲಸಿಕೀಕರಣ ಹೊಸ ವೇಗ ಪಡೆದುಕೊಂಡಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತಿದ್ದು ಅವು ಉತ್ತಮವಾಗಿ ಯೋಜನೆಯನ್ನು ಸಕ್ರಿಯಗೊಳಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುವ್ಯವಸ್ಥಿತಗೊಳಿಸುವ ಮೂಲಕ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ.

ದೇಶವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ, ಭಾರತ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲಿಸುತ್ತಿದೆ. ಕೋವಿಡ್ -19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ನೂತನ ಹಂತದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿನ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಯ ಪೈಕಿ ಶೇ.75ರಷ್ಟನ್ನು ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತವಾಗಿ) ಪೂರೈಸುತ್ತಿದೆ.

ಲಸಿಕೋ ಡೋಸ್

 

(27 ಜುಲೈ 2021ರಲ್ಲಿದ್ದಂತೆ)

 

ಪೂರೈಕೆ

 

45,73,30,110

ಸಾಗಣೆಯಲ್ಲಿರುವುದು

 

24,11,000

 

ಬಳಕೆ

 

43,80,46,844

 

 ಲಭ್ಯವಿರುವ ಬಾಕಿ ಲಸಿಕೆ

 

 

2,28,27,959

ಈವರೆಗೆ ಕೇಂದ್ರ ಸರ್ಕಾರ ಈವರೆಗೆ ರಾಜ್ಯಗಳಿಗೆ 45.73 ಕೋಟಿ (45,73,30,110) ಲಸಿಕೆ ಡೋಸ್ ಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲ ಮೂಲಗಳ ಮೂಲಕ ಪೂರೈಕೆ ಮಾಡಲಾಗಿದೆ ಮತ್ತು 24,11,000 ಡೋಸ್ ಲಸಿಕೆ ಸಾಗಣೆಯ ಹಂತದಲ್ಲಿವೆ. 

ಈ ಪೈಕಿ ಲಸಿಕೆ ವ್ಯರ್ಥವಾಗಿರುವುದೂ ಸೇರಿದಂತೆ ಒಟ್ಟು ಲಸಿಕೆ ಡೋಸ್ ಬಳಕೆ 43,80,46,844  ಆಗಿದೆ(ಇಂದು ಬೆಳಗ್ಗೆ 8 ಗಂಟೆಯವರೆಗೆ ಲಭ್ಯವಾದ ಮಾಹಿತಿಯಂತೆ).

2.28 ಕೋಟಿ (2,28,27,959)ಗೂ ಅಧಿಕ ಉಳಿಕೆ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್ ಗಳು ಲಸಿಕೆ ನೀಡಿಕೆಗೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶ ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿದೆ.

***



(Release ID: 1739341) Visitor Counter : 237