ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 28 JUL 2021 9:17AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕೆ ನೀಡಿಕೆಯ ಅಭಿಯಾನದಲ್ಲಿ ಇದುವರೆಗೆ 44.61 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಸೋಂಕು ದೇಶದಲ್ಲಿ ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,06,63,147 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಪ್ರಸ್ತುತ 97.39%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 41,678 ರೋಗಿಗಳು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 43,654 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ದೇಶಾದ್ಯಂತ ಸಕ್ರಿಯ ಪ್ರಕರಣಗಳ ಪ್ರಮಾಣ 3,99,436ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.27% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.36% ಇದೆ.

ದೈನಂದಿನ ಪಾಸಿಟಿವಿಟಿ ದರ 2.51%ಗೆ ತಗ್ಗಿದ್ದು, ಅದು ನಿರಂತರ 5% ಮಟ್ಟದ ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 46.09 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1739803) Visitor Counter : 217