ಪ್ರಧಾನ ಮಂತ್ರಿಯವರ ಕಛೇರಿ

ಕರ್ನಾಟಕದ ಮುಖ್ಯಮಂತ್ರಿಗಳಾಗಿ  ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 28 JUL 2021 1:16PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು, "ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಬಸವರಾಜ ಬೊಮ್ಮಾಯಿ ಜೀ@BSBommai ಅವರಿಗೆ ಅಭಿನಂದನೆಗಳು. ಅವರು  ಶಾಸಕಾಂಗ ಮತ್ತು ಆಡಳಿತಾತ್ಮಕ ಶ್ರೀಮಂತ ಅನುಭವವನ್ನು ಹೊಂದಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಮಾಡಿದ ಅಸಾಧಾರಣ ಕೆಲಸವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಅವರು ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ಫಲಪ್ರದ ಅಧಿಕಾರಾವಧಿಗಾಗಿ ಶುಭ ಹಾರೈಕೆಗಳು.” ಎಂದಿದ್ದಾರೆ.

***


(Release ID: 1739883) Visitor Counter : 272