ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

44.61 ಕೋಟಿ ಡೋಸ್ ದಾಟಿದ ಭಾರತದ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ


ಕಳೆದ 24 ತಾಸುಗಳಲ್ಲಿ 40 ಲಕ್ಷಕ್ಕಿಂತ ಅಧಿಕ ಡೋಸ್ ಲಸಿಕೆ ನೀಡಿಕೆ

ಕೊರೊನಾ ಚೇತರಿಕೆ ಪ್ರಮಾಣ 97.39%ಗೆ ಸುಧಾರಣೆ

ಕಳೆದ 24 ತಾಸುಗಳಲ್ಲಿ 43,654 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಭಾರತದ ಸಕ್ರಿಯ ಪ್ರಕರಣಗಳ ಪ್ರಮಾಣ 3,99,436ಕ್ಕೆ ಇಳಿಕೆ; ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1.27%ಗೆ ಇಳಿಕೆ

ದೈನಂದಿನ ಪಾಸಿಟಿವ್ ಪ್ರಕರಣಗಳ ಪ್ರಮಾಣ 2.51%ಗೆ ಇಳಿಕೆ; ಸತತ 51 ದಿನಗಳಿಂದ 5% ಮಟ್ಟದಿಂದ ಕೆಳಗೆ

Posted On: 28 JUL 2021 10:11AM by PIB Bengaluru

ಭಾರತದಲ್ಲಿ ದೇಶಾದ್ಯಂತ ಭರದಿಂದ ಸಾಗಿರುವ ಬೃಹತ್ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದಲ್ಲಿ ಇದುವರೆಗೆ 44.61 ಕೋಟಿ ಡೋಸ್ ಗಿಂತ ಹೆಚ್ಚಿನ ಅಂದರೆ 44,61,56,659 ಡೋಸ್ ಲಸಿಕೆ ನೀಡಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ಅಂಕಿಅಂಶದ ಪ್ರಕಾರ, 53,73,439 ಆಂದೋಲನಗಳಲ್ಲಿ ಈ ಪ್ರಮಾಣದ ಲಸಿಕೆ ಹಾಕಲಾಗಿದೆ. ಕಳೆದ 24 ತಾಸುಗಳಲ್ಲಿ 40,02,358 ಡೋಸ್ ಲಸಿಕೆ ನೀಡಲಾಗಿದೆ.

ಅದರಲ್ಲಿ ಈ ಕೆಳಗಿನ ಗುಂಪುಗಳು ಸೇರಿವೆ:

ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು

ಮೊದಲ ಡೋಸ್

1,02,93,723

2ನೇ ಡೋಸ್

77,53,002

ಮುಂಚೂಣಿ ಕಾರ್ಯಕರ್ತರು

ಮೊದಲ ಡೋಸ್

1,79,07,362

2ನೇ ಡೋಸ್

1,10,20,080

18-44 ವಯೋಮಾನದವರು

ಮೊದಲ ಡೋಸ್

14,44,83,609

2ನೇ ಡೋಸ್

68,86,188

45-59 ವಯೋಮಾನದವರು

ಮೊದಲ ಡೋಸ್

10,25,21,263

2ನೇ ಡೋಸ್

3,62,42,655

60 ವರ್ಷ ದಾಟಿದವರು

ಮೊದಲ ಡೋಸ್

7,41,18,104

2ನೇ ಡೋಸ್

3,49,30,673

ಒಟ್ಟು

44,61,56,659

ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ದೇಶಾದ್ಯಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಬದ್ಧವಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,06,63,147 ಜನರು ಸೋಂಕಿನಿಂದ ಈಗಾಗಲೇ ಗುಣಮುಖರಾಗಿದ್ದಾರೆ. ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 41,678 ರೋಗಿಗಳು ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟಾರೆ ಚೇತರಿಕೆ ದರ 97.39%ಗೆ ಸುಧಾರಣೆ ಕಂಡಿದೆ.

https://static.pib.gov.in/WriteReadData/userfiles/image/image0012026.jpg

 

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 43,654 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಸತತ 31 ದಿನಗಳಿಂದ ದೇಶದಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 50,000 ಮಟ್ಟದಿಂದ ಕೆಳಗಿರುವುದು ಆಶಾದಾಯಕ ಬೆಳವಣಿಗೆ. ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯ ಹಾದಿ ಹಿಡಿದಿದೆ.

https://static.pib.gov.in/WriteReadData/userfiles/image/image002VZDW.jpg

ಭಾರತದ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 3,99,436ಕ್ಕೆ ತಗ್ಗಿದ್ದು, ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.27%ಗೆ ಇಳಿಕೆ ಕಂಡಿದೆ.

https://static.pib.gov.in/WriteReadData/userfiles/image/image0039MVE.jpg

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಕಳೆದ 24 ತಾಸುಗಳಲ್ಲಿ 17,36,857 ಪರೀಕ್ಷೆಗಳನ್ನು ನಡೆಸಲಾಗಿದೆ. ಇದರೊಂದಿಗೆ ದೇಶಾದ್ಯಂತ ಒಟ್ಟು 46 ಕೋಟಿಗಿಂತ ಹೆಚ್ಚಿನ ಅಂದರೆ 46,09,00,978 ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿದ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.36%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ ಇದೀಗ 2.51%ಗೆ ತಗ್ಗಿದೆ. ದೈನಂದಿನ ಪಾಸಿಟಿವಿಟಿ ದರವು ಸತತ 51 ದಿನಗಳಿಂದ 5% ಮಟ್ಟದಿಂದ ಕೆಳಗಿದೆ.

https://static.pib.gov.in/WriteReadData/userfiles/image/image004BFLJ.jpg

***


(Release ID: 1739886) Visitor Counter : 278