ಪ್ರಧಾನ ಮಂತ್ರಿಯವರ ಕಛೇರಿ

ಕಿಶ್ತ್ವಾರ್ ಮತ್ತು ಕಾರ್ಗಿಲ್‌ನಲ್ಲಿ ಮೇಘಸ್ಫೋಟ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ: ಪ್ರಧಾನಿ

Posted On: 28 JUL 2021 12:28PM by PIB Bengaluru

ಕಿಶ್ತ್ವಾರ್ ಮತ್ತು ಕಾರ್ಗಿಲ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಕಿಶ್ತ್ವಾರ್ ಮತ್ತು ಕಾರ್ಗಿಲ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಬಾಧಿತ ಪ್ರದೇಶಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.ʼʼ ಎಂದಿದ್ದಾರೆ.

***



(Release ID: 1739897) Visitor Counter : 209