ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಪರಿಷ್ಕೃತ ವರದಿ
Posted On:
29 JUL 2021 9:15AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 45.07 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಕೊರೊನಾ ಸಾಂಕ್ರಾಮಿಕ ಸೋಂಕಿನಿಂದ ಇದುವರೆಗೆ 3,07,01,612 ಜನರು ಗುಣಮುಖರಾಗಿದ್ದಾರೆ.
ಇದರೊಂದಿಗೆ ಚೇತರಿಕೆ ದರ 97.38%ಗೆ ಸುಧಾರಣೆ ಕಂಡಿದೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 38,465 ರೋಗಿಗಳು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 43,509 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಪ್ರಸ್ತುತ 4,03,840 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಪಾಸಿಟಿವ್ ಪ್ರರಕಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1.28%ಗೆ ಇಳಿಕೆ ಕಂಡಿದೆ.
ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ ಅದು 2.38%ಗೆ ಇಳಿಕೆ ಕಂಡಿದೆ.
ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಅದೀಗ 2.52%ಗೆ ಇಳಿದಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷೆ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 46.26 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1740228)
Visitor Counter : 239