ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ದೇಶಾದ್ಯಂತ ಭರದಿಂದ ಸಾಗಿದ ಕೋವಿಡ್-19 ಲಸಿಕೆ ಅಭಿಯಾನ; ಇಲ್ಲಿಯ ತನಕ 45.60 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ನೀಡಿಕೆ


ಕಳೆದ 24 ತಾಸುಗಳಲ್ಲೇ 51 ಲಕ್ಷಕ್ಕಿಂತ ಹೆಚ್ಚಿನ ಡೋಸ್ ಲಸಿಕೆ ನೀಡಿಕೆ

ಚೇತರಿಕೆ ದರ 97.38%ಗೆ ಸುಧಾರಣೆ

ಕಳೆದ 24 ತಾಸುಗಳಲ್ಲಿ 44,230 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,155ಕ್ಕೆ ಇಳಿಕೆ; ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.28%

ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿಕೆ; ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ

Posted On: 30 JUL 2021 10:19AM by PIB Bengaluru

ಭಾರತದಲ್ಲಿ ಭರದಿಂದ ಸಾಗಿರುವ ಕೋವಿಡ್-19 ಬೃಹತ್ ಲಸಿಕಾ ಅಭಿಯಾನದಲ್ಲಿ ನಿನ್ನೆಯ ತನಕ ಒಟ್ಟು 45.60 ಕೋಟಿಗಿಂತ ಹೆಚ್ಚಿನ ಅಂದರೆ 45,60,33,754 ಡೋಸ್ ಲಸಿಕೆ ನೀಡಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ತಾತ್ಕಾಲಿಕ ವರದಿಯ ಪ್ರಕಾರ, 54,50,378 ಆಂದೋಲನಗಳಲ್ಲಿ ಈ ಸಾಧನೆ ಮಾಡಲಾಗಿದೆ. ಕಳೆದ 24 ತಾಸುಗಳಲ್ಲೇ 51,83,180 ಡೋಸ್ ಲಸಿಕೆ ಹಾಕಲಾಗಿದೆ.

ಈ ಕೆಳಗಿನ ಗುಂಪುಗಳು ಅದರಲ್ಲಿ ಸೇರಿವೆ:

ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು

1st ಡೋಸ್

1,02,98,871

2nd ಡೋಸ್

77,94,788

ಮುಂಚೂಣಿ ಕಾರ್ಯಕರ್ತರು

1st ಡೋಸ್

1,79,23,328

2nd ಡೋಸ್

1,11,57,062

18-44 ವಯೋಮಾನದವರು

1st ಡೋಸ್

14,95,34,704

2nd ಡೋಸ್

76,78,805

45-59 ವಯೋಮಾನದವರು

1st ಡೋಸ್

10,37,58,165

2nd ಡೋಸ್

3,75,98,059

60 ವರ್ಷ ದಾಟಿದವರು

1st ಡೋಸ್

7,46,25,671

2nd ಡೋಸ್

3,56,64,301

ಒಟ್ಟು

45,60,33,754

ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ಕೇಂದ್ರ ಸರ್ಕಾರವು ಬೃಹತ್ ಕೋವಿಡ್-19 ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಬದ್ಧವಾಗಿದೆ.

ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ, 3,07,43,972 ಜನರು ಈಗಾಗಲೇ ಸೋಂಕಿಂದ ಗುಣಮುಖರಾಗಿದ್ದಾರೆ. ಕಳೆದ 24 ತಾಸುಗಳಲ್ಲೇ 42,360 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.38%ಗೆ ಸುಧಾರಣೆ ಕಂಡಿದೆ.

https://static.pib.gov.in/WriteReadData/userfiles/image/image001NRHY.jpg

ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 44,230 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಸತತ 33 ದಿನಗಳಿಂದ ಪತ್ತೆಯಾಗುತ್ತಿರುವ ಕೊರೊನಾ ಹೊಸ ಪ್ರಕರಣಗಳ ಪ್ರಮಾಣ 50,000 ಮಟ್ಟದ ಕೆಳಗಿರುವುದು ಆಶಾದಾಯಕ ಬೆಳವಣಿಗೆ. ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ ದೈನಂದಿನ ಹೊಸ ಕೊರೊನಾ ಪ್ರಕರಣಗಳ ಪ್ರಮಾಣ ಇಳಿಮುಖದ ಹಾದಿ ಹಿಡಿದಿದೆ.

https://static.pib.gov.in/WriteReadData/userfiles/image/image002UX5X.jpg

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,05,155ರಷ್ಟಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ 1.28%ಗೆ ಇಳಿಕೆ ಕಂಡಿದೆ.

https://static.pib.gov.in/WriteReadData/userfiles/image/image0035H5J.jpg

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 18,16,277 ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರತದಲ್ಲಿ ಇದುವರೆಗೆ ಒಟ್ಟು 46 ಕೋಟಿಗಿಂತ ಹೆಚ್ಚಿನ ಅಂದರೆ 46,46,50,723 ಪರೀಕ್ಷಎಗಳನ್ನು ನಡೆಸಲಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಪ್ರಸ್ತುತ 2.43%ಗೆ ಮತ್ತು ದೈನಂದಿನ ಪಾಸಿಟಿವಿಟಿ ದರ 2.44%ಗೆ ಇಳಿದಿದೆ. ದೈನಂದಿನ ಪಾಸಿಟಿವಿಟಿ ದರ ಸತತ 53 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

https://static.pib.gov.in/WriteReadData/userfiles/image/image0048F9C.jpg

***



(Release ID: 1740635) Visitor Counter : 225