ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
Posted On:
30 JUL 2021 9:38AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 45.60 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಕೋವಿಡ್-19 ಸೋಂಕು ದೇಶದಲ್ಲಿ ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,07,43,972 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದರೊಂದಿಗೆ ಒಟ್ಟಾರೆ ಚೇತರಿಕೆ ದರ 97.38%ಗೆ ಸುಧಾರಣೆ ಕಂಡಿದೆ.
ಕಳೆದ 24 ತಾಸುಗಳಲ್ಲಿ 42,360 ರೋಗಿಗಳು ಗುಣಮುಖರಾಗಿದ್ದಾರೆ.
ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 44,230 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,05,155ಕ್ಕೆ ಇಳಿಕೆ ಕಂಡಿದೆ.
ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.28% ಇದೆ.
ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.43%ಗೆ ಇಳಿಕೆ ಕಂಡಿದೆ.
ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದಿಂದ ಕೆಳಗಿದ್ದು, ದೀಗ 2.44%ಗೆ ಇಳಿದಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ 46.46 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1740636)
Visitor Counter : 194