ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಪರಿಷ್ಕೃತ ವರದಿ

Posted On: 31 JUL 2021 9:07AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಬೃಹತ್ ಲಸಿಕಾ ಅಭಿಯಾನದಲ್ಲಿ ಇದುವರೆಗೆ 46.15 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾ ಸೋಂಕು ದೇಶದಲ್ಲಿ ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,07,81,263 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಪ್ರಸ್ತುತ 97.37%ಗೆ ಸುಧಾರಣೆ ಕಂಡಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 37,291 ರೋಗಿಗಳು ಚೇತರಿಸಿಕೊಂಡಿದ್ದಾರೆ.

ಕಳೆದ 24 ತಾಸುಗಳಲ್ಲಿ 41,649 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 4,08,920ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.29% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಕಾಯ್ದುಕೊಂಡಿದ್ದು, ಅದೀಗ 2.42%ಗೆ ಇಳಿಕೆ ಕಂಡಿದೆ.

ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದಿಂದ ಕೆಳಗಿದ್ದು, ಪ್ರಸ್ತುತ 2.34% ಇದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ದೇಶಾದ್ಯಂತ ಇದುವರೆಗೆ 46.64 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1741291) Visitor Counter : 171