ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
Posted On:
02 AUG 2021 9:36AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಬೃಹತ್ ಲಸಿಕೆ ಅಭಿಯಾನದಲ್ಲಿ ಇದುವರೆಗೆ 47.22 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,08,57,467 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದರೊಂದಿಗೆ ಚೇತರಿಕೆ ದರವೀಗ 97.35%ಗೆ ಸುಧಾರಣೆ ಕಂಡಿದೆ.
ಕಳೆದ 24 ತಾಸುಗಳಲ್ಲಿ 36,946 ರೋಗಿಗಳು ಗುಣಮಖರಾಗಿದ್ದಾರೆ.
ಭಾರತದಲ್ಲಿ ಕಳೆದ 24 ತಾಸುಗಳಲ್ಲೇ 40,134 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಒಟ್ಟು 4,13,718 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.31% ಇದೆ.
ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.37%ಗೆ ಇಳಿಕೆ ಕಂಡಿದೆ.
ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದಿಂದ ಕೆಳಗಿದ್ದು, ಅದೀಗ 2.81%ಗೆ ಇಳಿಕೆ ಕಂಡಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ 46.96 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1741421)
Visitor Counter : 277