ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಲಸಿಕೆ ನೀಡಿಕೆಯ ಇಂದಿನ ಪರಿಷ್ಕೃತ ವರದಿ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 49.64 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ನೀಡಿಕೆ
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 3.14 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಲಭ್ಯ
ಪ್ರಕಟಣಾ ದಿನಾಂಕ:
02 AUG 2021 11:26AM by PIB Bengaluru
ದೇಶಾದ್ಯಂತ ಭರದಿಂದ ಸಾಗಿರುವ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮಕ್ಕೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಲಸಿಕೆ ಲಭ್ಯತೆ ಖಾತ್ರಿಪಡಿಸುವ ಮೂಲಕ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಮೂಲಕ ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರವು ಅಭಿಯಾನವನ್ನು ವ್ಯಾಪಕಗೊಳಿಸಿದೆ.
ದೇಶವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಯನ್ನು ವಿತರಿಸಿ, ಬೆಂಬಲ ನೀಡುತ್ತಾ ಬಂದಿದೆ. ಅಭಿಯಾನ ಸಾರ್ವತ್ರೀಕರಣದ ಹೊಸ ಹಂತದ ಭಾಗವಾಗಿ, ಕೇಂದ್ರ ಸರ್ಕಾರವು ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ಪೂರೈಸುತ್ತಿದೆ.
|
ಲಸಿಕೆ ಡೋಸ್ ಗಳಲ್ಲಿ
|
02 ಆಗಸ್ಟ್ 2021
|
|
ಪೂರೈಕೆಯಾದ ಲಸಿಕೆ ಪ್ರಮಾಣ
|
49,64,98,050
|
|
ಸದ್ಯದಲ್ಲೇ ಲಭ್ಯವಾಗಲಿರುವ ಲಸಿಕೆ ಪ್ರಮಾಣ
|
9,84,610
|
|
ಬಾಕಿ ಉಳಿದಿರುವ ಲಸಿಕೆ ಪ್ರಮಾಣ
|
3,14,34,654
|
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಎಲ್ಲಾ ಖರೀದಿ ಮೂಲಗಳಿಂದ 49.64 ಕೋಟಿಗಿಂತ ಹೆಚ್ಚಿನ ಅಂದರೆ ಒಟ್ಟು 49,64,98,050 ಡೋಸ್ ಲಸಿಕೆ ವಿತರಿಸಲಾಗಿದೆ. ಜತೆಗೆ, ಹೆಚ್ಚುವರಿಯಾಗಿ ಸದ್ಯದಲ್ಲೇ 9,84,610 ಡೋಸ್ ಲಸಿಕೆ ಲಭ್ಯವಾಗಲಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ದೇಶಾದ್ಯಂತ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 3.14 ಕೋಟಿಗಿಂತ ಹೆಚ್ಚಿನ ಅಂದರೆ 3,14,34,654 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.
***
(ಪ್ರಕಟಣೆ ಐ.ಡಿ.: 1741521)
ವಿಸಿಟರ್ ಕೌಂಟರ್ : 276