ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಪರಿಷ್ಕೃತ ವರದಿ

Posted On: 03 AUG 2021 9:23AM by PIB Bengaluru

ದೇಶಾದ್ಯಂತ ಭರದಿಂದ ಸಾಗಿರುವ ಕೋವಿಡ್-19 ಬೃಹತ್ ಲಸಿಕೆ ಅಭಿಯಾನದಲ್ಲಿ ಇದುವರೆಗೆ 47.85 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,08,96,354 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ 97.38%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ 38,887 ರೋಗಿಗಳು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 30,549 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 4,04,958ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.28% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಅದೀಗ 2.39%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರವೂ 5% ಮಟ್ಟದ ಕೆಳಗಿದ್ದು, ಅದೀಗ 1.85%ಗೆ ಇಳಿಕೆ ಕಂಡಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ ಒಟ್ಟು 47.12 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1741784) Visitor Counter : 202