ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಪರಿಷ್ಕೃತ ವರದಿ
Posted On:
04 AUG 2021 9:07AM by PIB Bengaluru
ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಈವರೆಗೆ 48.52 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.
ದೇಶದಲ್ಲಿ ಈವರೆಗೆ 3,09,33,022 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ 97.37% ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 36,668 ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 42,625 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಸಕ್ರಿಯ ಪ್ರಕರಣಗಳು ಪ್ರಸ್ತುತ 4,10,353 ಮತ್ತು ಸಕ್ರಿಯ ಪ್ರಕರಣಗಳ ಪ್ರಮಾಣ 1.29% ರಷ್ಟಿದೆ.
ವಾರದ ಪಾಸಿಟಿವಿಟಿ ದರ ಶೇ 5 ಕ್ಕಿಂತ ಕಡಿಮೆ ಇದ್ದು, ಪ್ರಸ್ತುತ 2.36% ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ 2.31% ರಷ್ಟಿದ್ದು, 5% ಕ್ಕಿಂತ ಕಡಿಮೆ ದಾಖಲಾಗಿದೆ.
ಸೋಂಕು ಪತ್ತೆ ಪರೀಕ್ಷೆಯನ್ನು ಗಣನೀಯವಾಗಿ ಹೆಚ್ಚಿಸಿದ್ದು, ಈ ವರೆಗೆ ಒಟ್ಟು 47.31 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1742172)
Visitor Counter : 274