ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳೊಂದಿಗೆ ಆಗಸ್ಟ್ 5ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
Posted On:
04 AUG 2021 9:27AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಆಗಸ್ಟ್ 5ರಂದು 1 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರ ಪ್ರದೇಶದ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಉತ್ತರ ಪ್ರದೇಶ 2021ರ ಆಗಸ್ಟ್ 5ರಂದು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ದಿನವನ್ನು ಆಚರಿಸುತ್ತಿದೆ. ಯೋಜನೆಯ ಪ್ರಯೋಜನದಿಂದ ಯಾವುದೇ ಫಲಾನುಭವಿ ಕೈತಪ್ಪಿ ಹೋಗಬಾರದು ಎಂಬ ಹಿನ್ನೆಲೆಯಲ್ಲಿ ಇಡಿ ರಾಜ್ಯದಾದ್ಯಂತ ಬೃಹತ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮೂಲಕ ರಾಜ್ಯದ 15 ಕೋಟಿ ಫಲಾನುಭವಿಗಳು ಉಚಿತವಾಗಿ ಆಹಾರ ಧಾನ್ಯವನ್ನು ಪಡೆಯುತ್ತಿದ್ದಾರೆ. ರಾಜ್ಯದ ಸುಮಾರು 80 ಸಾವಿರ ನ್ಯಾಯ ಬೆಲೆ ಅಂಗಡಿಗಳು ಫಲಾನುಭವಿಗಳಿಗೆ ಯೋಜನೆಯಡಿಯಲ್ಲಿ ಆಹಾರ ಧಾನ್ಯ ವಿತರಿಸುತ್ತಿವೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಈ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ.
***
(Release ID: 1742187)
Visitor Counter : 248
Read this release in:
Malayalam
,
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu