ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಉಂಟಾದ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ನೆರವು ನೀಡಲು ರಾಜ್ಯ ಸರಕಾರದೊಂದಿಗೆ ಕೇಂದ್ರ ನಿಕಟವಾಗಿ ಕೆಲಸ ಮಾಡುತ್ತಿದೆ: ಪ್ರಧಾನಿ

प्रविष्टि तिथि: 04 AUG 2021 1:23PM by PIB Bengaluru

ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಮಧ್ಯಪ್ರದೇಶ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿಯವರು ಮುಖ್ಯಮಂತ್ರಿ ಶ್ರೀ ಶಿವರಾಜ ಸಿಂಗ್ ಚೌಹಾಣ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಸಹಾಯ ಮಾಡಲು ಕೇಂದ್ರ ಸರಕಾರ ಮಧ್ಯಪ್ರದೇಶ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ @ChouhanShivraj ಅವರೊಂದಿಗೆ ಮಾತನಾಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ." ಎಂದಿದ್ದಾರೆ.

***


(रिलीज़ आईडी: 1742283) आगंतुक पटल : 242
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam