ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಪಶ್ಚಿಮ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತನಾಡಿದ ಪ್ರಧಾನಿ

Posted On: 04 AUG 2021 1:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಜಲಾಶಯಗಳಿಂದ ನೀರು ಬಿಡುಗಡೆಯಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವ ಭರವಸೆ ನೀಡಿದರು.

"ಜಲಾಶಯಗಳಿಂದ ನೀರು ಬಿಡುಗಡೆಯಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು @narendramodi ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ @MamataOfficial ಅವರೊಂದಿಗೆ ಮಾತನಾಡಿದರು. ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವ ಭರವಸೆಯನ್ನು ಪ್ರಧಾನಿ ನೀಡಿದರು.ʼʼ ಬಾಧಿತ ಪ್ರದೇಶಗಳಲ್ಲಿರುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥಿಸಿದ್ದಾರೆ." ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

***


(Release ID: 1742284) Visitor Counter : 252