ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 05 AUG 2021 9:21AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 48.93 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,09,74,748 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಒಟ್ಟಾರೆ ಚೇತರಿಕೆ ದರ ಇದೀಗ 97.37%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 41,726 ರೋಗಿಗಳು ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ ನಿನ್ನೆ ಒಂದೇ ದಿನ ಅಂದರೆ ಕಳೆದ 24 ತಾಸುಗಳಲ್ಲಿ 42,982 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 4,11,076ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.29% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಒಳಗೆ ಕಾಯ್ದುಕೊಂಡಿದ್ದು, ಅದೀಗ 2.37%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟ ದರ ಕಳೆದ 10 ದಿನಗಳಿಂದ 3% ಮಟ್ಟದ ಒಳಗಿದ್ದು, ಪ್ರಸ್ತುತ 2.58%ಗೆ ಇಳಿದಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 47.48 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1742623) Visitor Counter : 236