ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯಪ್ರದೇಶದ ಪಿಎಂಜಿಕೆಎವೈ ಫಲಾನುಭವಿಗಳೊಂದಿಗೆ ಆಗಸ್ಟ್ 7ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ

Posted On: 05 AUG 2021 6:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಧ್ಯಪ್ರದೇಶದ  ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ(ಪಿಎಂಜಿಕೆಎವೈ) ಫಲಾನುಭವಿಗಳೊಂದಿಗೆ 2021 ಆಗಸ್ಟ್ 7ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಯಾವುದೇ ಅರ್ಹರು ಯೋಜನೆಯಿಂದ ಹೊರಗುಳಿಯಬಾರದು ಎಂದು ರಾಜ್ಯ ಸರ್ಕಾರ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲು ವ್ಯಾಪಕ ಅಭಿಯಾನ ಕೈಗೊಂಡಿದೆ. ರಾಜ್ಯ, 2021 ಆಗಸ್ಟ್ 7ರಂದು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ದಿನವನ್ನಾಗಿ ಆಚರಿಸಲಿದೆ.

ಪಿಎಂಜಿಕೆಎವೈ ಅಡಿಯಲ್ಲಿ ಮಧ್ಯಪ್ರದೇಶದ 4.83 ಕೋಟಿ ಫಲಾನುಭವಿಗಳು ಸುಮಾರು 25,000 ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತ ಪಡಿತರವನ್ನು ಪಡೆಯಲಿದ್ದಾರೆ.

ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯ್ ಪಟೇಲ್ ಮತ್ತು ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಲ್ಲದೆ ಉತ್ತರಾಖಂಡ, ಹಿಮಾಚಲಪ್ರದೇಶ, ಅರುಣಾಚಲಪ್ರದೇಶ, ಅಸ್ಸಾಂ, ತ್ರಿಪುರಾ, ಹರಿಯಾಣ ಮತ್ತು ಗೋವಾ ರಾಜ್ಯಗಳ ಆಹಾರ ವಲಯದ ಸಚಿವರು ಹಾಗೂ ಅಧಿಕಾರಿಗಳು ಕೂಡ ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

***


(Release ID: 1743032) Visitor Counter : 225