ಪ್ರಧಾನ ಮಂತ್ರಿಯವರ ಕಛೇರಿ

ಭಾರತೀಯ ಹಾಕಿ ತಂಡದ ಪ್ರತಿಯೊಬ್ಬ ಆಟಗಾರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರತಿಯೊಬ್ಬ ಹಾಕಿ ಪ್ರೇಮಿ ಮತ್ತು ಕ್ರೀಡಾ ಉತ್ಸಾಹಿಗಳಿಗೆ 2021ರ ಆಗಸ್ಟ್ 5 ಅತ್ಯಂತ ಸ್ಮರಣಾರ್ಹ ದಿನವಾಗಿ ಉಳಿಯಲಿದೆ: ಪ್ರಧಾನಮಂತ್ರಿ

ಪ್ರತಿಯೊಬ್ಬ ಭಾರತೀಯನ ಹೃದಯ ಮತ್ತು ಮನಸ್ಸಿನಲ್ಲಿ ಹಾಕಿಗೆ ವಿಶೇಷ ಸ್ಥಾನವಿದೆ

Posted On: 05 AUG 2021 8:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಲಿಂಪಿಕ್ಸ್ ನಲ್ಲಿ ದೇಶಕ್ಕೆ ಕಂಚಿನ ಪದಕವನ್ನು ತಂದ ಭಾರತೀಯ ಪುರುಷರ ಹಾಕಿ ತಂಡವನ್ನು ಶ್ಲಾಘಿಸಿದ್ದಾರೆ. ಪ್ರತಿಯೊಬ್ಬ ಭಾರತೀಯರ ಹೃದಯ ಮತ್ತು ಮನಸ್ಸಿನಲ್ಲಿ ಹಾಕಿಗೆ ವಿಶೇಷ ಸ್ಥಾನವಿದೆ ಎಂದು ಪ್ರಧಾನಮಂತ್ರಿ ಅವರು ಪುನರುಚ್ಛರಿಸಿದ್ದಾರೆ. ಪ್ರತಿಯೊಬ್ಬ ಹಾಕಿ ಪ್ರೇಮಿ ಮತ್ತು ಕ್ರೀಡಾ ಉತ್ಸಾಹಿಗೆ 2021 ಆಗಸ್ಟ್ 5 ಅತ್ಯಂತ ಸ್ಮರಣಾರ್ಹ ದಿನವಾಗಿ ಉಳಿಯಲಿದೆ ಎಂದು ಹೇಳಿದ್ದಾರೆ.

 

ಪ್ರಧಾನಮಂತ್ರಿ ಅವರು ತಮ್ಮ ಸರಣಿ ಟ್ವೀಟ್ ಗಳಲ್ಲಿ ಭಾರತ ತಂಡದ ಪ್ರತಿಯೊಬ್ಬ ಆಟಗಾರರಿಗೂ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಇದಕ್ಕೂ ಮುನ್ನ ಪ್ರಧಾನಮಂತ್ರಿ ಅವರು ಭಾರತದ ಅದ್ಭುತ ಗೆಲುವಿಗೆ ತಕ್ಷಣವೇ ರೀತಿಯ ಪ್ರತಿಕ್ರಿಯೆ ನೀಡಿದ್ದರು.

ಅಲ್ಲದೆ ಉತ್ತರ ಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ವೇಳೆ ಪ್ರಧಾನಮಂತ್ರಿ ಅವರು ಮತ್ತೊಮ್ಮೆ ಭಾರತೀಯ ಹಾಕಿ ತಂಡದ ಅದ್ಭುತ ಕ್ಷಣಗಳನ್ನು ತಂದುಕೊಟ್ಟಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

***



(Release ID: 1743037) Visitor Counter : 213