ಪ್ರಧಾನ ಮಂತ್ರಿಯವರ ಕಛೇರಿ

ಖೇಲ್ ರತ್ನ ಪ್ರಶಸ್ತಿಯನ್ನು  ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು: ಪ್ರಧಾನಮಂತ್ರಿ

Posted On: 06 AUG 2021 2:08PM by PIB Bengaluru

ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಮನವಿಗಳು ಬರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದೆಂದು ಅವರು ತಿಳಿಸಿದ್ದಾರೆ. 

ಅಲ್ಲದೆ, ಮೇಜರ್ ಧ್ಯಾನ್ ಚಂದ್ ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದರು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.  ನಮ್ಮ ದೇಶದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರನ್ನಿಡುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸರಣಿ ಟ್ವೀಟ್ ಗಳಲ್ಲಿ “ ಪುರುಷರು ಮತ್ತು ಮಹಿಳೆಯರ ಹಾಕಿ ತಂಡಗಳ ಅಸಾಧಾರಣ ಸಾಧನೆ ಇಡೀ ದೇಶದ ಗಮನಸೆಳೆದಿದೆ. ಭಾರತದ ಉದ್ದಗಲಕ್ಕೂ ಹಾಕಿಯ ಬಗ್ಗೆ ಆಸಕ್ತಿ ಮತ್ತೆ ಹೆಚ್ಚಾಗಿದೆ. ಮುಂಬರುವ ದಿನಗಳಿಗೆ ಇದು ಸಕಾರಾತ್ಮಕ ಸಂಕೇತವಾಗಿದೆ.

ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಪ್ರಜೆಗಳಿಂದ ಮನವಿಗಳು ಬರುತ್ತಿವೆ. ಅವರ ಅನಿಸಿಕೆಗಳಿಗಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು.

ಜೈ ಹಿಂದ್ ..!

ಮೇಜರ್ ಧ್ಯಾನ್ ಚಂದ್ ದೇಶದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು. ಅವರು ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದವರು. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರನ್ನಿಡುವುದು ಸೂಕ್ತ’’

ओलंपिक खेलों में भारतीय खिलाड़ियों के शानदार प्रयासों से हम सभी अभिभूत हैं। विशेषकर हॉकी में हमारे बेटे-बेटियों ने जो इच्छाशक्ति दिखाई है, जीत के प्रति जो ललक दिखाई है, वो वर्तमान और आने वाली पीढ़ियों के लिए बहुत बड़ी प्रेरणा है।

देश को गर्वित कर देने वाले पलों के बीच अनेक देशवासियों का ये आग्रह भी सामने आया है कि खेल रत्न पुरस्कार का नाम मेजर ध्यानचंद जी को समर्पित किया जाए। लोगों की भावनाओं को देखते हुए, इसका नाम अब मेजर ध्यानचंद खेल रत्न पुरस्कार किया जा रहा है।

जय हिंद!"

***



(Release ID: 1743203) Visitor Counter : 282