ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 09 AUG 2021 9:47AM by PIB Bengaluru

ದೇಶಾದ್ಯಂತ ಭರದಿಂದ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 50.86 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3.11,39,457 ಜನರು ಸೋಂಕಿನಿಂದ  ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ ಪ್ರಸ್ತುತ 97.40%ಗೆ ಸುಧಾರಣೆ ಕಂಡಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 39,686 ರೋಗಿಗಳು ಗುಣಮುಖರಾಗಿದ್ದಾರೆ.

ಭಾರತದಲ್ಲಿ ನಿನ್ನೆ ಒಂದೇ ದಿನ 35,499 ಹೊಸ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿವೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಪ್ರಸ್ತುತ 4,02,188ಕ್ಕೆ ಇಳಿಕೆ ಕಂಡಿದೆ.

ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.26% ಇದೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಅದೀಗ 2.35%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ ಸತತ 14 ದಿನಗಳಿಂದ 3% ಮಟ್ಟದಿಂದ ಕೆಳಗಿದ್ದು, ಪ್ರಸ್ತುತ 2.59%ಗೆ ಇಳಿಕೆ ಕಂಡಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ ಒಟ್ಟು 48.17 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1744004) Visitor Counter : 269