ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಲಸಿಕೆ ನೀಡಿಕೆಯ ಇಂದಿನ ಪರಿಷ್ಕೃತ ವರದಿ


ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 52.40 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ನೀಡಿಕೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.33 ಕೋಟಿಗಿಂತ ಹೆಚ್ಚಿನ ಡೋಸ್ ಲಸಿಕೆ ಲಭ್ಯ

Posted On: 09 AUG 2021 9:58AM by PIB Bengaluru

ದೇಶಾದ್ಯಂತ ಭರದಿಂದ ಸಾಗಿರುವ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2021 ಜೂನ್ 21ರಿಂದ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಲಸಿಕೆ ಲಭ್ಯತೆ ಖಾತ್ರಿಪಡಿಸುವ ಮೂಲಕ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಖಚಿತಪಡಿಸುವ ಮೂಲಕ ಹಾಗೂ ಪೂರೈಕೆ ಸರಪಳಿಯನ್ನು ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಅಭಿಯಾನಕ್ಕೆ ವೇಗ ನೀಡಿದೆ.

ರಾಷ್ಟ್ರವ್ಯಾಪಿ ಲಸಿಕೆ ಆಂದೋಲನ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ಪೂರೈಸುತ್ತಿದೆ. ಅಭಿಯಾನ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ವಿತರಿಸುತ್ತಿದೆ.

ಲಸಿಕೆ ಡೋಸ್ ಗಳಲ್ಲಿ

09 ಆಗಸ್ಟ್ 2021

ಪೂರೈಕೆಯಾದ ಲಸಿಕೆ ಪ್ರಮಾಣ

52,40,60,890

ಸದ್ಯದಲ್ಲೇ ಲಭ್ಯವಾಗಲಿರುವ ಲಸಿಕೆ ಪ್ರಮಾಣ

8,39,780

ಬಳಕೆಯಾದ ಲಸಿಕೆ ಪ್ರಮಾಣ

50,51,29,252

ಲಭ್ಯವಿರುವ ಲಸಿಕೆ ಪ್ರಮಾಣ

2,33,55,890

ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 52.40 ಕೋಟಿಗಿಂತ ಹೆಚ್ಚಿನ ಅಂದರೆ ಒಟ್ಟು 52,40,60,890 ಡೋಸ್ ಲಸಿಕೆಯನ್ನು ಪೂರೈಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ 8,39,780 ಡೋಸ್ ಲಸಿಕೆ ಅತಿ ಶೀಘ್ರವೇ ಲಭ್ಯವಾಗಲಿದೆ.

52.40 ಕೋಟಿ ಲಸಿಕೆ ಪೈಕಿ ಸವಕಳಿ ಸೇರಿದಂತೆ ಒಟ್ಟು 50,51,29,252 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಪ್ರಕಟವಾದ ದತ್ತಾಂಶದಿಂದ ತಿಳಿದುಬಂದಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದೆ ಉಳಿದಿರುವ 2.33 ಕೋಟಿಗಿಂತ ಹೆಚ್ಚಿನ ಅಂದರೆ ಒಟ್ಟು 2,33,55,890 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

***



(Release ID: 1744015) Visitor Counter : 163