ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
Posted On:
10 AUG 2021 9:57AM by PIB Bengaluru
ಭಾರತದಲ್ಲಿ ಕಳೆದ 24 ತಾಸುಗಳಲ್ಲಿ ಅಂದರೆ ನಿನ್ನೆ ಒಂದೇ ದಿನ 28,204 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 147 ದಿನಗಳಿಂದ ಪತ್ತೆಯಾಗುತ್ತಿರುವ ಹೊಸ ಪ್ರಕರಣಗಳಲ್ಲಿ ಇದು ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.
ದೇಶದಲ್ಲಿ ಒಟ್ಟು 3,88,508 ಸಕ್ರಿಯ ಪ್ರಕರಣಗಳಿದ್ದು, ಕಳೆದ 139 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಆಗಿದೆ.
ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.21%ರಷ್ಟಿದ್ದು, ಇದು 2020 ಮಾರ್ಚ್ ನಿಂದ ಅತ್ಯಂತ ಕನಿಷ್ಠವಾಗಿದೆ.
ಅತ್ಯಧಿಕ ಚೇತರಿಕೆ ದರ ಸಾಧಿಸಲಾಗಿದ್ದು, ಪ್ರಸ್ತುತ 97.45%ಗೆ ಸುಧಾರಣೆ ಕಂಡಿದೆ.
ದೇಶಾದ್ಯಂತ ಇದುವರೆಗೆ 3,11,80,968 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 41,511 ರೋಗಿಗಳು ಗುಣಮುಖರಾಗಿದ್ದಾರೆ.
ದೇಶವ್ಯಾಪಿ ನಡೆಯುತ್ತಿರುವ ಭರದ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನದ್ಲಿ 51.45 ಕೋಟಿಗಿಂತ ಹೆಚ್ಚಿನ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ.
ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.36%ಗೆ ತಗ್ಗಿದೆ.
ದೈನಂದಿನ ಪಾಸಿಟಿವಿಟಿ ದರ 1.87%ಗೆ ಇಳಿಕೆ ಕಂಡಿದ್ದು, ಸತತ 15 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರಾವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 48.32 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1744369)
Visitor Counter : 272