ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 11 AUG 2021 9:31AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಒಟ್ಟು 51.90 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 3,86,351ಕ್ಕೆ ಇಳಿಕೆ ಕಂಡಿದೆ. ಕಳೆದ 140 ದಿನಗಳಲ್ಲಿ ಇದು ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.21% ಇದೆ. 2020 ಮಾರ್ಚ್|ನಿಂದ ಇದು ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 40,013 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 3,12,20,981 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ 97.45%ಗೆ ಸುಧಾರಣೆ ಕಂಡಿದ್ದು, ಇದು ಅತ್ಯಂತ ಗರಿಷ್ಠ ಚೇತರಿಕೆ ದರವಾಗಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 38,353 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ವಾರದ ಪಾಸಿಟಿವಿಟಿ ದರ 5% ಮಟ್ಟದ ಕೆಳಗಿದ್ದು, ಅದೀಗ 2.34%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ ಕಳೆದ 16 ದಿನಗಳಿಂದ 3% ಕೆಳಗಿದ್ದು, ಪ್ರಸ್ತುತ 2.16%ಗೆ ಇಳಿದಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ 48.50 ಕೋಟಿ ಜನರಿಗೆ ಪರೀಕ್ಷೆ ನಡೆಸಲಾಗಿದೆ.

***



(Release ID: 1744750) Visitor Counter : 205