ಪ್ರಧಾನ ಮಂತ್ರಿಯವರ ಕಛೇರಿ

ಕಿನ್ನೌರ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರಾದವರ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ

Posted On: 11 AUG 2021 9:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿನ್ನೌರ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ; “ಕಿನ್ನೌರ್ ನಲ್ಲಿನ ಭೂಕುಸಿತ ದುರಂತ ತೀವ್ರ ದುಃಖ ತಂದಿದೆ. ಈ ಶೋಕದ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರ  ಕುಟುಂಬದವರಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಮತ್ತು ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಸಾಧ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

***(Release ID: 1744989) Visitor Counter : 186