ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 12 AUG 2021 9:18AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 52.36 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 3,87,987ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.21% ಇದೆ; 2020 ಮಾರ್ಚ್ ನಿಂದ ಇದು ಅತ್ಯಂತ ಕನಿಷ್ಠ ಪ್ರಮಾಣವಾಗಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 39,069 ರೋಗಿಗಳು ಗುಣಮುಖರಾಗಿದ್ದಾರೆ.

ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,12,60,050 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಚೇತರಿಕೆ ದರ 97.45%ಗೆ ಸುಧಾರಣೆ ಕಂಡಿದೆ; ಈವರೆಗಿನ ಅತ್ಯಂತ ಗರಿಷ್ಠ ಚೇತರಿಕೆ ಇದಾಗಿದೆ.

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ41,195 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ವಾರದ ಪಾಸಿಟಿವಿಟಿ ದರ ಸತತ 5% ಮಟ್ಟದಿಂದ ಕೆಳಗೆ ಮುಂದುವರಿದಿದ್ದು, ಪ್ರಸ್ತುತ 2.23%ಗೆ ತಗ್ಗಿದೆ.

ದೈನಂದಿನ ಪಾಸಿಟಿವಿಟಿ ದರ 1.94%ಗೆ ಇಳಿಕೆ ಕಂಡಿದೆ; ಸತತ 17 ದಿನಗಳಿಂದ 3% ಮಟ್ಟದ ಕೆಳಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 48.73 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***



(Release ID: 1745077) Visitor Counter : 198